ಮಂಗಳೂರು : ಭಾರೀ ಮಳೆಗೆ ವಿದ್ಯುತ್ ತಂತಿ ಕಡಿದು ಬಿದ್ದ ಹಿನ್ನಲೆ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ರೊಸಾರಿಯೊ ಶಾಲಾ ಹಿಂಭಾಗದಲ್ಲಿ ನಡೆದಿದೆ.

ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ, ಹಾಸನ ಮೂಲದ ರಾಜು ಪಾಲ್ಯ ಮೃತರು.
ತುಕ್ಕು ಹಿಡಿದ ವಿದ್ಯುತ್ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಇನ್ನೊಬ್ಬ ಆಟೋ ಚಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳ ಮೆಸ್ಕಾಂ ಹಾಗೂ ಮನಪ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

























