ಪುತ್ತೂರು : ಕಾರು ಚಾಲಕನೋರ್ವ ಅಜಾಗರೂಕತೆ ಮತ್ತು ನಿರ್ಲಕ್ಷದಿಂದ ಕಾರು ಚಲಾಯಿಸಿ ಹಲವು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿರುವುದಾಗಿ ನೀಡಿರುವ ದೂರಿನ ಮೇರೆಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಂಡುರಂಗ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಜೂ. 26ರಂದು ಸಂಜೆ ಕಾರು ಚಾಲಕ ಕಾರನ್ನು ಪುತ್ತೂರು ಬಸ್ ನಿಲ್ದಾಣದ ಬಳಿ ಇರುವ ಮೊಬೈಲ್ ಶಾಪ್ ಬಳಿ, ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ, ಪಾಂಡುರಂಗ ಅವರ ಹಿಂದಿನಿಂದ ಬರುತ್ತಿದ್ದ ಸ್ಕೂಟರಿಗೆ ಅಪಘಾತ ಪಡಿಸಿ, ಬಳಿಕ ಪಾಂಡುರಂಗ ಚಲಾಯಿಸಿಕೊಂಡು ಹೋಗುತ್ತಿದ್ದ, ಸ್ಕೂಟರಿಗೆ ಅಪಘಾತಪಡಿಸಿದ್ದು, ಘಟನೆಯಲ್ಲಿ ಪಾಂಡುರಂಗ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಸ್ಕೂಟರ್ ಸವಾರೆಯೋರ್ವರಿಗೂ ಗಾಯಗಳಾಗಿದ್ದು, ಅಪಘಾತದ ಬಳಿಕ ಚಾಲಕ ಗಾಯಾಳುವನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಿಸದೇ, ಪೊಲೀಸ್ ಠಾಣೆಗೆ ಮಾಹಿತಿ ನೀಡದೇ ಪರಾರಿಯಾಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 79/2024 ಕಲಂ: 279, 337 ಐಪಿಸಿ. 134(a&b) IMV ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


























