ಪುತ್ತೂರು : ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.

ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ನಗರಸಭಾ ಸದಸ್ಯೆ ಗೌರಿ ಬನ್ನೂರು, ಪ್ರೇಮಲತಾ ನಂದಿಲ ಈ ವೇಳೆ ಉಪಸ್ಥಿತರಿದ್ದರು.


























