ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜೂ.28 ರಂದು(ಶುಕ್ರವಾರ) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.


























