ವಿಟ್ಲ ನಿವಾಸಿ, ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ, ವಿಠಲ್ ಎಜ್ಯುಕೇಶನ್ ಸೊಸೈಟಿ ಸಂಚಾಲಕ ಎಲ್ ಎನ್ ಕೂಡೂರು ನಿಧನರಾದರು.
ಇವರು ಕೃಷಿಕರಾಗಿದ್ದು, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ ಹಲವು ವರ್ಷಗಳ ವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಹೃದಯಾಘಾತ ಕಾಣಿಸಿಕೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಮದ್ಯಾಹ್ನ ವೇಳೆಗೆ ಮೃತದೇಹ ಮನೆಗೆ ಆಗಮಿಸಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

























