ಮಂಗಳೂರು: ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು..
ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದೆಹಲಿಯಲ್ಲಿದ್ದ ಕಾರಣ ಇಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಭಾರ ಅಧ್ಯಕ್ಷ ಹೇಮಂತ್ ಶೆಟ್ಟಿ, ಜಿಲ್ಲೆಯ ಹಾಗೂ ಮಂಡಲದ ಮುಖಂಡರು ಅಧಿಕಾರಿಗಳು ಮತ್ತು ಪಾರ್ಟಿಯ ಪ್ರಮುಖರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂತ್ರಸ್ತರಿಗೆ ಶೀಘ್ರವಾಗಿ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಗ್ರಾಮವಾರು ಸರ್ವೇಕ್ಷಣೆ ನಡೆಸಿ ಅಪಾಯಕಾರಿ ಸ್ಥಳಗಳಲ್ಲಿ ವಾಸಿಸುತ್ತಿರುವ ಮನೆಗಳನ್ನು ಗುರುತಿಸುವಂತೆ ತಹಶಿಲ್ದಾರರಿಗೆ ಸೂಚಿಸಿದರು.

























