ಹಾಸನ : ಕೌಟುಂಬಿಕ ಕಲಹ ಹಿನ್ನೆಲೆ ಪತಿ ಪತ್ನಿಗೆ ಚಾಕು ಇರಿದ ಘಟನೆ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ.
ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ್ದಾರೆ. ಚಾಕು ಇರಿತಕ್ಕೆ ಒಳಗಾಗಿದ್ದ ಪತ್ನಿ ಸಾವನ್ನಪ್ಪಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದು, ಇಂದು ಪತಿ ವಿರುದ್ಧ ಮಮತಾ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದರು.
ಈ ವೇಳೆ ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದಿದ್ದಾರೆ. ಕೂಡಲೇ ಮಮತಾರನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಸಾವನ್ನಪ್ಪಿದ್ದಾರೆ.


























