ಮಂಗಳೂರು : ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಬಿ. ಜನಾರ್ಧನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಈ ವೇಳೆ ಉಪಸ್ಥಿತರಿದ್ದರು.


























