ರಾಜಸ್ಥಾನ : ಬೊಲೆರೊ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕರೌಲಿ ಮತ್ತು ಮಂದರಯಾಲ್ ರಸ್ತೆಯ ದುಂಡಾಪುರ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಕರೌಲಿ ಜಿಲ್ಲಿಯ ಕಿಯೋಲಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೊಲೊರೊ ವಾಹನಕ್ಕೆ ಟ್ರಕ್ ಗುದ್ದಿದೆ. ಬೊಲೊರೊದಲ್ಲಿ 13 ಜನರಿದ್ದರು. ಅದರಲ್ಲಿ 9 ಜನರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಬೊಲೊರೊ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸಮಯದಲ್ಲಿ ದೊಡ್ಡ ಶಬ್ಧ ಏರ್ಪಟ್ಟಿದ್ದು, ಸ್ಥಳಕ್ಕೆ ಸ್ಥಳೀಯರು ಆಗಮಿಸಿದ್ದಾರೆ. ತಕ್ಷಣ ಪೊಲೀಸರಿಗೆ ಮತ್ತು ಆ್ಯಂಬುಲೆನ್ಸ್ಗೆ ಮಾಹಿತಿ ನೀಡಿದ್ದಾರೆ.
ಮೃತರಲ್ಲಿ ಕೆಲವರು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಇನ್ನಿತರರು ರಾಜಸ್ಥಾನ್ ಕರೌಲಿಯ ಮುಂಡ್ರಾಯಲ್ ಖಿರ್ಕನ್ ಗ್ರಾಮದವರು ಎಂದು ತಿಳಿದುಬಂದಿದೆ. ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


























