ಪುತ್ತೂರು : ಕೆಯ್ಯೂರು ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ದನದ ಕೈ ತುಂಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಜೂ.4 ರಂದು ಮುಂಜಾನೆ ನಡೆದಿದೆ.
ಕೆಯ್ಯೂರು ಗ್ರಾಮ ಪಂಚಾಯತ್ ನ ಎದುರುಗಡೆಯ ಅಂಗಳದಲ್ಲಿ ದನದ ಕೈ ತುಂಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯಾರದರು ಕಿಡಿಗೇಡಿಗಳು ತಂದು ಎಸೆದಿದ್ದಾರೊ ಅಥವಾ ನಾಯಿಗಳು ತಂದು ಹಾಕಿದ್ದೋ ಎಂದು ಸಂಶಯ ವ್ಯಕ್ತವಾಗಿದೆ. ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಈ ಪರಿಸರದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಗ್ರಾಮ ಪಂಚಾಯತ್ ಪರಿಸರದಲ್ಲಿ ಇಂತಹ ಕೃತ್ಯವನ್ನು ಎಸಗಿ ಗಲಭೆಯನ್ನು ಸೃಷ್ಟಿಸುವ ಕೆಲಸವನ್ನು ಯಾರೋ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಇದ್ದಕ್ಕೆ ಆಸ್ಪದ ಕೊಡದೆ ಇಂತಹ ಕೃತ್ಯವನ್ನು ಎಸಗಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.