ಬೆಂಗಳೂರು : ಯುವ ಪ್ರೇಮಿಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಇಬ್ಬರ ಮೃತದೇಹ ಸಿಕ್ಕಿದೆ.
ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು.
ಇಬ್ಬರು ಕಳೆದ ಕೆಲ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು, ಜುಲೈ 1 ರಂದು ನಾಪತ್ತೆಯಾಗಿದ್ದರು.
ವಿದ್ಯಾರ್ಥಿನಿ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರದಲ್ಲಿ ವಾಸವಿದ್ದಳು. ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದನು. ಯುವ ಜೋಡಿಯ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಜುಲೈ 1 ರಂದು ನಾಪತ್ತೆಯಾಗಿದ್ದರು.
ನಾಪತ್ತೆ ಹಿನ್ನಲೆ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೀಗ ಶ್ರೀಕಾಂತ್ ಮತ್ತು ಅಂಜನಾ ಮೃತದೇಹ ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ.

























