ಮಂಗಳೂರು : ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ಈಗಾಗಲೇ ರಕ್ಷಣೆ ಮಾಡಲಾಗಿದ್ದು, ಮತ್ತೋರ್ವನ ರಕ್ಷಣೆಗಾಗಿ ಕಾಂಕ್ರೀಟ್ ಗೋಡೆಗೆ ರಂಧ್ರ ತೆಗೆದು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ ಎಂಬಾತ ಮಣ್ಣಿನಡಿ ಸಿಲುಕಿದ್ದು, ವೈದ್ಯರ ತಂಡ ಆತನಿಗೆ ಡ್ರಿಫ್ಸ್ ನೀಡುತ್ತಿದೆ.
ಬಿಹಾರ ಮೂಲದ ರಾಜ್ ಕುಮಾರ್ (18) ಎಂಬಾತನನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ನೇತೃತ್ವದಲ್ಲಿ ಕಾರ್ಮಿಕನಿಗೆ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.

























