ಬಂಟ್ವಾಳ : ಭಾರೀ ಮಳೆ ಹಿನ್ನಲೆ ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬಿ.ಇ.ಒ/ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ಭಾರೀ ಮಳೆ ಬರುತ್ತಿರುವ ಕಾರಣ (ರಾತ್ರಿಯೂ ಮಳೆಸುರಿದ ಕಾರಣ) ತೋಡು, ಹಳ್ಳ, ಕೈಸೇತುವೆಗಳನ್ನು ದಾಟಿ ಶಾಲೆಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿರುವ ಕಾರಣ ಜುಲೈ 4 ರಂದು ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆವಹಿಸಿ. –ತಹಶೀಲ್ದಾರ್/ಬಿ.ಇ.ಒ ಬೆಳ್ತಂಗಡಿ



























