ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ, ಬೆಳ್ತಂಗಡಿಯ ಖಾಸಗಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಬೊಳ್ಮನಾರಿನ ವೆಂಕಟೇಶ್ ಎಂಬವರ ಪುತ್ರಿ ಅನಿತಾ ಜೂನ್ 29ರಂದು ತಡರಾತ್ರಿ ವಿಷ ಪದಾರ್ಥ ಸೇವಿಸಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಜುಲೈ 3ರಂದು ಮಧ್ಯರಾತ್ರಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ವಿದ್ಯಾರ್ಥಿನಿ ಅನಿತಾ ಎರಡು ಪುಟಗಳ ಡೆತ್‌ನೋಟ್ ಬರೆದಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


























