ಪುತ್ತೂರು : ದೇವಸ್ಯ – ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿದರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ , ಬಲ್ನಾಡು ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗಿದ್ದು, ಒಳಮೊಗ್ರು ಗ್ರಾಮದ ಒಂದು ಹಳ್ಳಿ ಸಂಪರ್ಕ ಕಡಿದುಕೊಂಡಂತಾಗಿದೆ. ಆದ್ದರಿಂದ ಶೀಘ್ರವಾಗಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಬೇಕೆಂದು ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ , ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ , ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಸಂಚಾಲಕ ರಾಜೇಶ್ ರೈ ಪರ್ಪುಂಜ , ಅಜಿತ್ ರೈ ಹೊಸಮನೆ , ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ ಸೇರ್ತಾಜೆ , ಮಹೇಶ್ ರೈ ಕೇರಿ ಉಪಸ್ಥಿತರಿದ್ದರು.
ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು ಈ ವಿಚಾರವನ್ನು ಈಗಾಗಲೇ ಆ ಭಾಗದ ಬಿಜೆಪಿ ಪ್ರಮುಖರು ನನ್ನ ಗಮನಕ್ಕೆ ತಂದಿದ್ದು, ಈ ಬಗ್ಗೆ ಬದಲಿ ಕ್ರಮವಹಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಾನು ಖುದ್ದು ಮಾತನಾಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸುವಂತೆ ಹೇಳುತ್ತೇನೆ ಎಂದರು.