ವಿಟ್ಲ : ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಿಲಪದವು ಸಮೀಪದ ಮಚ್ಚ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಗಾಯಗೊಂಡ ಯುವಕನನ್ನು ಮಂಗಿಲಪದವು ಪೊನ್ನೆತ್ತಡಿ ನಿವಾಸಿ ಶೋಭಿತ್ ಎಂದು ಗುರುತಿಸಲಾಗಿದೆ.
ಮಚ್ಚ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನ ಹಾಗೂ ವಿಟ್ಲ ಕಡೆಯಿಂದ ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.



























