ಬೆಂಗಳೂರು : ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಸಹ ಮಾಲಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ಒನ್ 8 ಕಮ್ಯೂನ್ ಪಬ್ ಮೇಲೆ ಕೇಸ್ದಾಖಲಾಗಿದೆ.
ಕಸ್ತೂರ್ಬಾ ರಸ್ತೆಯಲ್ಲಿ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಇದೆ. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನಲೆ ಎಫ್ಐಆರ್ ದಾಖಲಾಗಿದೆ.
ಜುಲೈ 6ರಂದು 1.20 ವರೆಗೆ ಪಬ್ ಓಪನ್ ಇತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರೋದಾಗಿ ಮಾಹಿತಿ ಬಂದಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಗ್ರಾಹಕರಿರುವುದು ಬೆಳಕಿಗೆ ಬಂದಿದೆ.
ಅವಧಿಗೂ ಮೀರಿ ಅನಧಿಕೃತವಾಗಿ ಪಬ್ ಓಪನ್ ಇದ್ದ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.


























