ಕಡಬ : ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ನುಗ್ಗಿದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪ ನಡೆದಿದೆ.

ಮರ್ದಾಳ ಸಮೀಪದ ನೆಕ್ಕಿತ್ತಡ್ಕ ಸಮೀಪ ಘಟನೆ ನಡೆದಿದೆ.
ಕೋಡಿಂಬಾಳ ಗ್ರಾಮದ ಕೊಡಂಕೇರಿಯ ದಾಮೋದರ ಗೌಡ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ನುಗ್ಗಿದೆನ್ನಲಾಗಿದೆ. ಘಟನೆಯಲ್ಲಿ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


























