ಬಂಟ್ವಾಳ : ಬಿ.ಮೂಡ ಗ್ರಾಮದಲ್ಲಿ ಟೈಲರ್‌ವೊಬ್ಬ ತನ್ನ ಅಂಗಡಿಗೆ ಬಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಆರೋಪಿಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
ಟೈಲರ್ ವೃತ್ತಿ ನಿರ್ವಹಿಸುತ್ತಿರುವ ಧರ್ಮರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜು.8ರಂದು ಸಂಜೆ ಬಾಲಕಿ ಅಂಗಡಿಗೆ ಬಂದ ಸಂದರ್ಭ ಕೈ ಹಿಡಿದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























