ಮಂಗಳೂರು : ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಮಂಗಳೂರು ಪಾಲಿಕೆ ಮುಂಭಾಗ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಲಾಲ್ ಭಾಗ್ ಸರ್ಕಲ್ ಬಳಿ ಟ್ರಾಫಿಕ್ ಜಾಂ ಉಂಟಾಗಿದೆ.
ರಸ್ತೆ ತಡೆ ನಡೆಸಿದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಪಕ್ಕಕ್ಕೆ ಸರಿಸಿದರು.
ಪಾಲಿಕೆ ಮುಂಭಾಗ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ.




























