ಮಂಗಳೂರು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ಎಫ್‌ಐಆರ್ ದಾಖಲಾಗಿದ್ದು, ಈಗ ವಿಚಾರಣೆಗ ಬರುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮೂರು ದಿನಗಳ ಒಳಗೆ ತನಿಖಾಧಿಕಾರಿ ಎದುರು ಹಾಜರಾಗಿ ವಿಚಾರಣೆ ಎದುರಿಸುವಂತೆ ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ರಾಘವೇಂದ್ರ ಬೈಂದೂರು ನೋಟಿಸ್ ಜಾರಿ ಮಾಡಿದ್ದಾರೆ.
ಪಾಲಿಕೆ ಸದಸ್ಯ ಕಾಂಗ್ರೆಸ್‌ನ ಅನಿಲ್ ಕುಮಾರ್ ದೂರಿನ ಮೇಲೆ ಭರತ್ ಶೆಟ್ಟಿ ಮೇಲೆ ಭಾರತೀಯ ನ್ಯಾಯ ಸಂಹಿತೆಯ 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























