ಬೆಂಗಳೂರು : ರಾಹುಲ್ ಗಾಂಧಿ ವಿರುದ್ಧ ನಿಂದನಾತ್ಮಕ ಭಾಷಣ ಮಾಡಿದ್ದ ಆರೋಪ ಪ್ರಕರಣದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೈ.ಭರತ್ ಶೆಟ್ಟಿ ರವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಮಧ್ಯಾಂತರ ಜಾಮೀನು ನೀಡಿ ಆದೇಶಿಸಿದರು.
ಭರತ್ ಶೆಟ್ಟಿ ಅವರಿಗೆ 1 ಲಕ್ಷ ರೂ. ವೈಯಕ್ತಿಕ ಬಾಂಡ್, ಒಬ್ಬರ ಭದ್ರತೆ, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ತಿರುಚಬಾರದು, ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂಬ ಷರತ್ತು ವಿಧಿಸಲಾಗಿದೆ.