ಕಲಬುರಗಿ : ಆರು ತಿಂಗಳ ಹಿಂದೆ ಮೃತಪಟ್ಟ ಅಧಿಕಾರಿಯನ್ನು ವರ್ಗಾವಣೆ ಮಾಡಿ ಸರ್ಕಾರ ಮತ್ತು ಪೌರಾಡಳಿತ ಇಲಾಖೆ ಯಡವಟ್ಟು ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜಿನಿಯರ್ ಅಶೋಕ ಪುಟಪಾಕ ರನ್ನು ವರ್ಗಾವಣೆ ಮಾಡಿ ಯಡವಟ್ಟು ಮಾಡಿದೆ. ಅಶೋಕ ಪುಟಪಾಕ ಜನವರಿ 12 ರಂದು ಮೃತಪಟ್ಟಿದ್ದರು. ಜು.9 ರಂದು ಕೊಡಗಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿ ಲೇವಡಿಗೆ ಗುರಿಯಾಗಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದ ನಿವಾಸಿಯಾಗಿದ್ದ ಅಶೋಕ್ ಸೇಡಂ ಪುರಸಭೆಯಲ್ಲಿ ಕಿರಿಯ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಇಲಾಖೆಯ ನೌಕರ ಮೃತಪಟ್ಟ ವಿಚಾರ ಗೊತ್ತಿಲ್ಲದೆಯೇ ವರ್ಗಾವಣೆ ಮಾಡಲಾಗಿದೆಯಾ ಅಥವಾ ಸಾಯುವ ಮುನ್ನ ಅಶೋಕ್ ಪುಟಪಾಕ ವರ್ಗಾವಣೆ ಬಯಸಿದ್ದರಾ ಎಂಬ ಪ್ರಶ್ನೆ ಮೂಡಿದೆ.




























