ಪುತ್ತೂರು : ಪುತ್ತೂರು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರಸಭಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕೊರೊನಾ ವಾರಿಯರ್ಸ್ ಗೆ ಮಾಸ್ಕ್ ವಿತರಣಾ ಕಾರ್ಯಕ್ರಮವು ನೆಲ್ಲಿಕಟ್ಟೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೂ.5 ರಂದು ನಡೆಯಿತು. ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರು ಕಿಟ್ ಅನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಮಾಜಿ ಅಧ್ಯಕ್ಷ ಮುರಳಿಧರ ರೈ ಮಠಂತಬೆಟ್ಟು, ನಗರ ಸಭಾ ಸದಸ್ಯೆ ಶೈಲಾ ಪೈ, ಮಹಮ್ಮದ್ ರಿಯಾಝ್, ಮಾಜಿ ಸದಸ್ಯ ಮುಖೇಶ್ ಕೆಮ್ಮಿಂಜೆ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಚಾಲಕ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಎಪಿಎಂಸಿ ಸದಸ್ಯ ಶಕೂರ್ ಹಾಜಿ, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ, ಶಿವರಾಮ ಆಳ್ವ, ನ್ಯಾಯವಾದಿ ಸಾಹಿರಾ ಝುಬೈರ್, ಪೂರ್ಣೇಶ್ ಕುಮಾರ್, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.