ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಇಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದೊಳಗೆ ಕೆಳ ಮಹಡಿಯಿಂದ ಮೇಲ್ಮಹಡಿಗೆ ತೆರಳುವ ಮೆಟ್ಟಿಲುಗಳ ಕೆಳಗೆ ವ್ಯಕ್ತಿಯೊಬ್ಬರು ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ತಿಳಿದು ಬಂದಿದೆ.
ಈ ವೇಳೆ ಅನ್ಯ ಕಾರ್ಯ ನಿಮಿತ್ತ ಸ್ಥಳಕ್ಕೆ ಆಗಮಿಸಿದ ಕೋಡಿಂಬಾಡಿ ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸುವಲ್ಲಿ ಪೊಲೀಸರಿಗೆ ನೆರವಾದರು.
ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.
.



























