ಉತ್ತರ ಕನ್ನಡ : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್ಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.
ಮಣ್ಣಿನಡಿ 9 ಜನ ಸಿಲುಕಿದ್ದಾರೆ. ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. 9 ಜನರಲ್ಲಿ 7 ಮಂದಿ ಮೃಪಟ್ಟಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.




























