ನಿರಂತರ ಮಳೆ/ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ತನಕದ ಶಿಕ್ಷಣ ಸಂಸ್ಥೆಗಳಿಗೆ ಜು.18 ಗುರುವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.