ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೀರಾ ಅವಶ್ಯಕತೆ ಇರುವ ಎರಡು ಆಕ್ಸಿಜನ್ ಜಂಬೋ ಸಿಲಿಂಡರ್ ಸಹಿತ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಆಕ್ಸಿಜನ್ ಜಂಬೋ ಆಕ್ಸಿಜನ್ ಮತ್ತು ಇನ್ನಿತರ ಅಗತ್ಯ ಸಾಮಾಗ್ರಿಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ವೇದವತಿ ಅವರಿಗೆ ಹಸ್ತಾಂತರ ಮಾಡಿ ಮಾತನಾಡಿ ಕೊರೊನಾ ರೋಗವನ್ನು ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಕೊರೊನಾ ವಾರಿಯರ್ಸ್ ಗಳಾದ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಪತ್ರಕರ್ತರು, ಪೊಲೀಸರಿಗೆ ವಿವಿಧ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ ಮಾತನಾಡಿ ಕೊರೊನಾ ವಾರಿಯರ್ಸ್ ಆರೋಗ್ಯ ಪೂರ್ಣವಾಗಿದ್ದರೆ ಎಲ್ಲರೂ ಆರೋಗ್ಯಪೂರ್ಣರಾಗುತ್ತಾರೆ. ಎಲ್ಲರೂ ಕೊರೊನಾ ಬಗ್ಗೆ ಎಚ್ಚರದಿಂದರಬೇಕು ಎಂದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಎಂ ಎಸ್ ಮಹಮ್ಮದ್, ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಪ್ರಮುಖರಾದ ಉಮನಾಥ ಶೆಟ್ಟಿ, ಅಶ್ರಪ್ ಬಸ್ತಿಕಾರ್, ಪ್ರಸಾದ್ ಕೌಶಲ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕುಲ್ ಅಕ್ಬರ್, ಸಂತೋಷ್ ಭಂಡಾರಿ ಚಿಲಿಮ್ಮೆತ್ತಾರ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿಕೆಎಂ ಅಶ್ರಪ್, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉಪಾಧ್ಯಕ್ಷೆ ನೆಬಿಸಾ, ಪದ್ಮನಾಭ ಪೂಜಾರಿ ಅಳಿಕೆ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ಹಸೈನಾರ್ ನೆಲ್ಲಿಗುಡ್ಡೆ, ಸುನೀತಾ ಕೋಟ್ಯಾನ್, ಎಂ.ಕೆ ಮೂಸಾ, ಜಯಪ್ರಕಾಶ್ ಬದಿನಾರ್, ರವೀಂದ್ರ ಗೌಡ, ಸೀತಾರಾಮ ಶೆಟ್ಟಿ ಅಳಿಕೆ, ಪಂಚಪಾಲ ಶೆಟ್ಟಿ ಪೆರುವಾಯಿ, ಅಶೋಕ ಡಿಸಿಲ್ವ, ಶ್ರೀಧರ್ ಬಾಳೆಕಲ್ಲು, ಶ್ರೀಧರ್ ಶೆಟ್ಟಿ ಪುಣಚ, ಎಲ್ಯಣ್ಣ ಪೂಜಾರಿ, ಕರೀಂ ಕುದ್ದುಪದವು, ಬಾಲಕೃಷ್ಣ ಪೂಜಾರಿ ಪುಣಚ, ಶ್ರೀನಿವಾಸ ಶೆಟ್ಟಿ ಕೊಲ್ಯ,ರಂಜಿತ್ ಬಂಗೇರ,ಅಭಿಷೇಕ್ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.