ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಂದರ ನಾಯ್ಕ್ ಮಜಲು ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ವೀಕ್ಷಿಸಿದರು.
ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರಲ್ಲಿ ಮಾತನಾಡಿ ತಕ್ಷಣಕ್ಕೆ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಕೊಡಿಪ್ಪಾಡಿ ಗ್ರಾ.ಪಂ ಸದಸ್ಯ ನವೀನ್ , ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪ್ರಸನ್ನ ಮಾರ್ತ ಜೊತೆಗಿದ್ದರು.
ಇಒ ನವೀನ್ ಭಂಡಾರಿಯವರ ಸೂಚನೆಯಂತೆ ಗ್ರಾಮ ಪಂಚಾಯತ್ ವತಿಯಿಂದ ಸದ್ಯದ ಮಟ್ಟಿಗೆ ಮನೆಗೆ ಟರ್ಪಾಲು ಹೊದಿಕೆಯ ವ್ಯವಸ್ಥೆಯಾಗಿದೆ.