ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.



























