ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ವರದಿಯಾಗಿದೆ.
ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.
ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.
ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.