ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಜೂ.5 ರಂದು ಉದ್ಘಾಟಿಸಲಾಯಿತು.
ಈ ಘಟಕದಲ್ಲಿ ಪ್ರತಿ ನಿಮಿಷಕ್ಕೆ 46 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿಯೂ ಹಂತಹಂತವಾಗಿ ಆಕ್ಸಿಜನ್ ಘಟಕ ಸ್ಥಾಪನೆಯಾಗಲಿದೆ.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿ, ಎ.ಸಿ.ಮದನ್ ಮೋಹನ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪ. ಸದಸ್ಯ ಎಂ.ತುಂಗಪ್ಪ ಬಂಗೇರ, ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಸದಸ್ಯೆ ಸುಲೋ ಜಿ.ಕೆ.ಭಟ್, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಕುಕ್ಕಿಪಾಡಿ ಅಧ್ಯಕ್ಷೆ ಸುಜಾತ ಆರ್ ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ತಹಶಿಲ್ದಾರ್ ರಶ್ಮಿ. ಎಸ್. ಆರ್, ಡಾ. ಉಮೇಶ್ ಅಡ್ಯಾಂತಾಯ, ಇಂಜಿನಿಯರ್ ಕೃಷ್ಣ, ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.