ಬಂಟ್ವಾಳ : ಘಟ ಪ್ರದೇಶದಲ್ಲಿ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ನೀರಿನ ಮಟ್ಟ 7.9 ಮೀ. ಗೆ ತಲುಪಿದೆ.
ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.
ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು ಬಂದಿರುತ್ತದೆ. ಪೇಟೆ ಭಾಗದ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ. ನದಿಯ ದಡಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ, ಪೆರ್ನೆ ಮತ್ತು ನೀರಿನ ಅಪಾಯಕಾರಿ ಮಟ್ಟದಿಂದ ಅಪಾಯವುಳ್ಳ ಶಾಲೆಗಳ ಸಿಆರ್ ಪಿ ಮತ್ತು ಎಸ್‌ಟಿಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ಹೇಳಿದ್ದಾರೆ.