ಹಾಸನ : ರಾಜ್ಯದ ಹಲವೆಡೆ ಮಳೆರಾಯನ ಅಬ್ಬರ ಮುಂದುವರೆದಿದ್ದು, ಕೆಲವೆಡೆ ಗುಡ್ಡ, ಮಣ್ಣು ಕುಸಿಯುತ್ತಿದೆ. ಹಾಸನದ ಸಕಲೇಶಪುರದಲ್ಲೂ ಮಳೆಯಿಂದಾಗಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ. ಪರಿಣಾಮ ರಸ್ತೆ ಸಮೇತ ಭೂಮಿ ಕೊಚ್ಚಿ ಹೋಗಿದೆ.
ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ ನಡೆದಿದೆ.
ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ರಸ್ತೆ 200 ಮೀಟರ್ಗೂ ಹೆಚ್ಚು ದೂರ ಕೊಚ್ಚಿ ಹೋಗಿದೆ.
ರಸ್ತೆಯೇ ಕೊಚ್ಚಿಹೋಗಿರೋದ್ರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತ ಆರೋಪ ಕೇಳಿಬಂದಿದೆ.