ಉಪ್ಪಿನಂಗಡಿ : ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿ ಹೊಂದಿರುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಸಂಗಮವನ್ನು ಕಣ್ತುಂಬಿಕೊಳ್ಳಲು ಜನರು ಕಾತುರರಾಗಿದ್ದಾರೆ.
ನಿನ್ನೆಯಿಂದ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ನೇತ್ರಾವತಿ ಮತ್ತು ಕುಮಾರಧಾರ ನದಿ ಅಪಾಯದ ಮಟ್ಟವನ್ನು ಮೀರಿ ಮೈದುಂಬಿ ಹರಿಯುತ್ತಿದೆ.
ನೇತ್ರಾವತಿ- ಕುಮಾರಧಾರಾ ನದಿಗಳು ಉಕ್ಕೇರಿ ಹರಿಯುತ್ತಿದ್ದು, ನದಿ ಪಾತ್ರದ ಪ್ರದೇಶಗಳು ಜಲಾವೃತಗೊಂಡಿವೆ.
ಸಂಗಮವನ್ನು ವೀಕ್ಷಿಸಲು ಹಲವಾರು ಮಂದಿ ಆಗಮಿಸಿದ್ದು, ಮಳೆಯನ್ನು ಲೆಕ್ಕಿಸದೆ ಜನ ಸಂಗಮವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.