ಪುತ್ತೂರು : ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ಶಿಶು ಮಂದಿರ ಪರ್ಲಡ್ಕ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಸಹಯೋಗದಲ್ಲಿ ನಡೆಯಲಿರುವ ಶ್ರೀ ಕೃಷ್ಣಲೋಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಇದರ ಅಧ್ಯಕ್ಷರಾದ ಉಮೇಶ ನಾಯಕ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಅವರು, ಪುತ್ತೂರಿನ ಹೃದಯ ಭಾಗದಲ್ಲಿರುವ ವಿವೇಕಾನಂದ ಶಿಶು ಮಂದಿರವು ನಂದಗೋಕುಲದಂತೆ ಬೆಳಗಲಿ, ಶ್ರೀಕೃಷ್ಣಲೋಕ ಕಾರ್ಯಕ್ರಮವು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಜರುಗಲಿ ಎಂದು ಶುಭ ಹಾರೈಸಿದರು.
ಸಮಿತಿಯ ಗೌರವ ಅಧ್ಯಕ್ಷರಾದ ರಾಜೀ ಬಲರಾಮ್ ಮತ್ತು ಪದಾಧಿಕಾರಿಗಳು, ಶಿಶುಮಂದಿರದ ಆಡಳಿತ ಮಂಡಳಿಯ ಸದಸ್ಯರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅನ್ಯಾನ್ಯ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಪದಾಧಿಕಾರಿಗಳು, ಶಿಕ್ಷಕ, ಶಿಕ್ಷಕಿಯರು, ಶಿಶು ಮಂದಿರದ ಮಾತಾಜಿಯವರು, ಶಿಶು ಮಂದಿರದ ಹಿತೈಷಿಗಳು, ಪಾಲಕರು ಉಪಸ್ಥಿತರಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಮೇಘನಾ ಪಾಣಾಜೆ ಸ್ವಾಗತಿಸಿ, ಸಮಿತಿಯ ಕೋಶಾಧಿಕಾರಿ ಕಿಶನ್ ಕುಮಾರ್ ಕೆ.ಎಸ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಮಿತಿಯ ಅಧ್ಯಕ್ಷರಾದ ಸಂತೋಷ ಕುಮಾರ್ ರೈ ಧನ್ಯವಾದ ಸಮರ್ಪಣೆ ಮಾಡಿದರು.