ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಕಾರಣ ನಾಳೆ (ಆ.1) ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.