ಬಂಟ್ವಾಳ : ಅಪ್ರಾಪ್ತ ಬಾಲಕಿಯೋರ್ವಳನ್ನು ಪುಸಲಾಯಿಸಿ ಭಿನ್ನಕೋಮಿನ ಯುವಕರು ಪಾರ್ಕ್‌ವೊಂದಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ಫೈಜಲ್ ಹಾಗೂ ಲಿಕೇಶ್ ಬಂಧಿತ ಆರೋಪಿಗಳಾಗಿದ್ದು, ಅಫೀಕ್ ತಲೆಮರೆಸಿಕೊಂಡಿದ್ದಾನೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಾಲಕಿಯನ್ನು ಪಾರ್ಕಿಗೆ ಬರುವಂತೆ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು.