ಪುತ್ತೂರು : ಕಬಕ ಗ್ರಾಮದ ಕಲ್ಲಂದಡ್ಕದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು.31ರಂದು ಕಬಕ ಗ್ರಾಮದ ಕಲ್ಲಂದಡ್ಕದಲ್ಲಿ ಉಮ್ಮರ್ ಫಾರೂಕ್ ಎಂಬಾತನ ಮನೆಯ ಶೆಡ್ ನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಗಾಂಜಾ ವಶಪಡಿಸಿಕೊಂಡು ಆರೋಪಿ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 8(ಸಿ), 20(ಬಿ), ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲು ಮಾಡಲಾಗಿದೆ.