ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ತೆಂಕಿಲದಲ್ಲಿ ಗುಡ್ಡ ಜರಿದು ರಸ್ತೆಗೆ ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.
ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ಈಗಾಗಲೇ ಭರದಿಂದ ಸಾಗುತ್ತಿದ್ದು, ನಗರಸಭೆ ಅಧಿಕಾರಿಗಳು, ಪೊಲೀಸರು ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲಿದ್ದು, ಈ ಸಲ ಭಾರೀ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ.