ಉಪ್ಪಿನಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುರತ್ಕಲ್ ಚೊಕ್ಕಬೆಟ್ಟು, ಕೃಷ್ಣಾಪುರ ನಿವಾಸಿ ಮಹಮ್ಮದ್ ಶಾಫಿ ಬಂಧಿತ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:103/2012 ಕಲಂ:394,34 ಐಪಿಸಿ ಪ್ರಕರಣದ ಆರೋಪಿ ಮಹಮ್ಮದ್ ಶಾಫಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ ಎಸ್ ಹಾಗೂ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕರುಗಳಾದ ಅವಿನಾಶ್ ಹೆಚ್ ಗೌಡ, ರುಕ್ಮ ನಾಯ್ಕ ರವರುಗಳ ಮಾರ್ಗದರ್ಶನದಲ್ಲಿ, ಸಿಬ್ಬಂದಿಗಳಾದ ಹಿತೋಷ್ ಕುಮಾರ್, ಗಿರೀಶ್ ವಿ ರವರ ತಂಡ ಆ.1ರಂದು ಉಡುಪಿ ಜಿಲ್ಲೆಯ ಅಂಪಾರ್ ಎಂಬಲ್ಲಿಂದ ದಸ್ತಗಿರಿ ಮಾಡಿ ಪುತ್ತೂರು ACJ&JMFC ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.