ಪುತ್ತೂರು : ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಬಪ್ಪಳಿಗೆಯಲ್ಲಿ ಗುಡ್ಡ ಕುಸಿಯುವ ಭೀತಿಯಲ್ಲಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ ವೇಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗುವುದು ಎಂದು ಪುತ್ತೂರು ಸಹಾಯಕ ಕಮಿಷನರ್ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.
ಆ.2ರ ನಸುಕಿನ ಜಾವ ಬಪ್ಪಳಿಗೆ ಬೈಪಾಸ್ ಬಳಿ ಗುಡ್ಡದಿಂದ ಮಣ್ಣು ರಸ್ತೆಯ ಮೇಲೆ ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದರೂ ಗುಡ್ಡದ ಮೇಲೆ ಕೆಲವೊಂದು ಆಪಾಯಕಾರಿ ಮರಗಳಿರುವ ಹಿನ್ನಲೆ ಮತ್ತೆ ಗುಡ್ಡ ಕುಸಿಯುವ ಭೀತಿಯಿದೆ.
ಈ ಹಿನ್ನಲೆ ರಾತ್ರಿ ವೇಳೆ ಬೈಪಾಸ್ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಾಗಿ ಪುತ್ತೂರು ಪೇಟೆಯನ್ನು ಬಳಸಿಕೊಳ್ಳುವ ವಿಚಾರವಾಗಿ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.