ಸಂಪಾಜೆ : ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಡಗು ಸಂಪಾಜೆ ಅರಣ್ಯ ಇಲಾಖಾ ಕಚೇರಿ ಸಮೀಪ ನಡೆದಿದೆ.
ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಇಬ್ಬರು ಯುವಕರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕೊಡಗು ಸಂಪಾಜೆಯ ಅರಣ್ಯ ಇಲಾಖಾ ಕಚೇರಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಯುವಕರು ಪಕ್ಕದ ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಡಗು ಸಂಪಾಜೆ ಪೊಲೀಸ್ ಉಪಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.