ಬೆಂಗಳೂರು : ಮುಡಾ ಹಗರಣ ಸಂಬಂಧ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ‘ಮೈಸೂರು ಚಲೋ ಪಾದಯಾತ್ರೆ’ ನಡೆಸುತ್ತಿದೆ. ಹಲವಾರು ಮಂದಿ ಜೆಡಿಎಸ್, ಬಿಜೆಪಿ ಪ್ರಮುಖರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ದಕ್ಷಿಣ ಕನ್ನಡ ಮಾಜಿ ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್ ಹಾಗೂ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಆ.5 ರಂದು ಭಾಗವಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪನವರ ಜೊತೆ ಪಾದಾಯಾತ್ರೆಯಲ್ಲಿ ಹೆಜ್ಜೆ ಹಾಕಿದರು.