ಶಿವಮೊಗ್ಗ : ಚಲಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ.
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಕೆ.ಎಸ್.ಆರ್.ಟಿ.ಸಿ ಬಸ್ ಸಂಪೂರ್ಣ ಹಾನಿಯಾಗಿದೆ.
ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ವಾಯವ್ಯ ಸಾರಿಗೆ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 12 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ವಾಯುವ್ಯ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ರಸ್ತೆ ಮಧ್ಯೆದಲ್ಲೇ ಬಸ್ ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ 12 ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.