ಪುತ್ತೂರು:ಕರ್ನಾಟಕ ರಾಜ್ಯ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಪರ್ಪುಂಜ – ಕುರಿಯ – ಪಂಜಳ ರೂ.1.5ಕೋಟಿ ಅನುದಾನದ ರಸ್ತೆ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸ ಸಮಾರಂಭ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಹರೀಶ್ ಬಿಜತ್ರೆ, ಶ್ರೀ ಶಿವರಂಜನ್, ಶ್ರೀ ಮೀನಾಕ್ಷಿ ಮಂಜುನಾಥ್, ಎಪಿಯಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಯೋಜನಾ ವಿಭಾಗದ ಸಹಾಯಕ ಕಾರ್ಯಪಾಲ ಅಭಿಯಂತರರಾದ ಶ್ರೀನಿವಾಸ್ ಮೂರ್ತಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.