ಮಂಗಳೂರು : ಬಾಡಿಗೆ ಮನೆಯಲ್ಲಿ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಮೂಲದ ಫಕೀರಪ್ಪ ಹಣಮಪ್ಪ ಬಂಧಿತ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಪ್ಪ ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ:67/2024 ಕಲಂ:103 (1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದ್ದು, ಓರ್ವನನ್ನು ಬಂಧಿಸಲಾಗಿದೆ.
ಫಕೀರಪ್ಪ ಪ್ರಸ್ತುತ ವಿಜಯ ವಿಠಲ ಭಜನಾ ಮಂದಿರದ ಹಿಂಭಾಗ, ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿದ್ದು, ಕಳೆದ 6 ತಿಂಗಳಿನಿಂದ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಪರಿಸರದಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿರುತ್ತಾನೆ. ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣವನ್ನು ಅತೀ ಶೀಘ್ರದಲ್ಲಿ ಭೇದಿಸುವಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಐ.ಪಿ.ಎಸ್. ರವರ ಮಾರ್ಗದರ್ಶನದಂತೆ, ಸಿದ್ದಾರ್ಥ ಗೋಯಲ್, ಐ.ಪಿ.ಎಸ್. ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ), ಬಿ.ಪಿ ದಿನೇಶ್ ಕುಮಾರ್ ಡಿ.ಸಿ.ಪಿ. (ಅಪರಾಧ ಮತ್ತು ಸಂಚಾರ ವಿಭಾಗ), ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರವೀಶ್ ನಾಯಕ್ (ಪ್ರಭಾರ) ಮತ್ತು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಮನೋಜ್ ಕುಮಾರ್ ನಾಯ್ ರವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕಿ ಶ್ರೀಕಲಾ ಕೆ.ಟಿ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ. ಕೃಷ್ಣ, ಬಿ.ಕೆ. ಹೆಚ್.ಸಿ.ಗಳಾದ ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್, ಸಿಪಿಸಿ ಗಳಾದ ಶಶಿಕುಮಾರ್, ರಾಕೇಶ್ ಭಾಗವಹಿಸಿರುತ್ತಾರೆ.