ಬಂಟ್ವಾಳ : ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಂಜನಪದವು ಕರಾವಳಿ ಸೈಟ್ ನಿವಾಸಿ, ಉದಯ ಆಚಾರ್ಯ ಅವರ ಪುತ್ರ, ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಭವಿಷ್ಯ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ.
ಆ.7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.