ಮಂಗಳೂರು : ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು, ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ.
ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.