ಈಶ್ವರಮಂಗಲ: ಕಾಸರಗೋಡಿನ ನೆಟ್ಟಣಿಗೆ ಗ್ರಾಮದ ಕುಳದಪಾರೆ ಸಮೀಪದ ನಿದಿಯಡ್ಕ ನಿವಾಸಿಯಾದ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾ(25 ವ)ರವರು ಜೂ.6ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಾ ಅವರಿಗೆ ಈ ಹಿಂದೆಯಷ್ಟೆ ವಿವಾಹ ನಿಶ್ಚಿತಾರ್ಥವಾಗಿದ್ದು, ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ವಿವಾಹವು ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ತಾಯಿ ಬೀಡಿ ಬ್ರೆಂಚ್ ಗೆ ತೆರಳಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರಿಯಾ ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಬಡಗನ್ನೂರು ಸರಕಾರಿ ಹಿರಿಯ ಶಾಲೆಯಲ್ಲಿ ಕೆಲಕಾಲ ಗೌರವ ಶಿಕ್ಷಕಿಯಾಗಿ ಕೆಲಸ ಮಾಡಿದ್ದರು. ನಂತರ ಈಶ್ವರಮಂಗಲ ಜೆರಾಕ್ಸ್ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ.